ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಅಟೆಂಡರ್ (Peon) ಮತ್ತು ಪ್ರೊಸೆಸ್ ಸರ್ವರ್ (Process Server) ಹುದ್ದೆಗಳ ಭರ್ತಿಗೆ ಅಧಿಕೃತ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. 10ನೇ ತರಗತಿ ಪೂರ್ಣಗೊಳಿಸಿದ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.ಈ ನೇಮಕಾತಿಯ ಕುರಿತಾದ ಸಂಪೂರ್ಣ ವಿವರಗಳನ್ನು ಕೆಳಗೆ ನೀಡಲಾಗಿದೆ.
ಉದ್ಯೋಗದ ಸಂಕ್ಷಿಪ್ತ ಮಾಹಿತಿ

- ಮಾಹಿತಿ ವಿವರ ವಿವರಗಳು.
- ಸಂಸ್ಥೆಯ ಹೆಸರು ಶಿವಮೊಗ್ಗ ಜಿಲ್ಲಾ ನ್ಯಾಯಾಲಯ
- ಒಟ್ಟು ಹುದ್ದೆಗಳು 62
- ಹುದ್ದೆಗಳ ಹೆಸರು ಅಟೆಂಡರ್ (Peon ), Process ಸರ್ವರ್
- ವಿದ್ಯಾರ್ಹತೆ 10ನೇ ತರಗತಿ ( 10th pass )
- ಮಾಸಿಕ ವೇತನ ₹27,000 ರಿಂದ 46,675/-
- ಉದ್ಯೋಗ ಸ್ಥಳ ಶಿವಮೊಗ್ಗ (ಕರ್ನಾಟಕ )
ವಿದ್ಯಾರ್ಹತೆ ಮತ್ತು ವಯೋಮಿತಿ :
ವಿದ್ಯಾರ್ಹತೆ : ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿ (SSLC) ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು
ವಯೋಮಿತಿ :ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಕನಿಷ್ಠ 18 ವರ್ಷ ತುಂಬಿರಬೇಕು ಹಾಗೂ ಗರಿಷ್ಠ 40 ವರ್ಷ ಮೀರಬಾರದು.
ವಯೋಮಿತಿ ಸಡಿಲಿಕೆ:
- 2A, 2B, 3A, 3B ಅಭ್ಯರ್ಥಿಗಳಿಗೆ: 3 ವರ್ಷಗಳು
- SC, ST, ಪ್ರವರ್ಗ-1 ಅಭ್ಯರ್ಥಿಗಳಿಗೆ: 5 ವರ್ಷಗಳು
ಅರ್ಜಿ ಶುಲ್ಕ
ಸಾಮಾನ್ಯ ವರ್ಗ (GM): ₹200/-
ಪ್ರವರ್ಗ 2A, 2B, 3A, 3B: ₹100/-
SC / ST / PWD (ವಿಕಲಚೇತನ) ಅಭ್ಯರ್ಥಿಗಳಿಗೆ: ಸಂಪೂರ್ಣ ಉಚಿತ
ಪಾವತಿ ವಿಧಾನ: ಆನ್ಲೈನ್ (Online) ಮೂಲಕ
ಅರ್ಜಿ ಸಲ್ಲಿಸುವುದು ಹೇಗೆ?
- ಮೊದಲಿಗೆ ಇ-ಕೋರ್ಟ್ನ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ, ನೇಮಕಾತಿ ಅಧಿಸೂಚನೆಯನ್ನು (Notification) ಪೂರ್ತಿಯಾಗಿ ಓದಿಕೊಳ್ಳಿ.
- ನಿಮ್ಮ ಬಳಿ ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ ಇರಲಿ.
- ಆಧಾರ್ ಕಾರ್ಡ್, 10ನೇ ತರಗತಿ ಅಂಕಪಟ್ಟಿ, ಜಾತಿ/ಆದಾಯ ಪ್ರಮಾಣಪತ್ರ ಹಾಗೂ ಇತ್ತೀಚಿನ ಫೋಟೋವನ್ನು ಸ್ಕ್ಯಾನ್ ಮಾಡಿ ಸಿದ್ಧವಾಗಿಟ್ಟುಕೊಳ್ಳಿ.
- ಆನ್ಲೈನ್ ಅರ್ಜಿ ಲಿಂಕ್ ಕ್ಲಿಕ್ ಮಾಡಿ, ಕೇಳಲಾದ ಎಲ್ಲಾ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ.
- ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಆನ್ಲೈನ್ನಲ್ಲಿ ಪಾವತಿಸಿ ‘Submit’ ಬಟನ್ ಒತ್ತಿ.
- ಭವಿಷ್ಯದ ಉಲ್ಲೇಖಕ್ಕಾಗಿ ಭರ್ತಿ ಮಾಡಿದ ಅರ್ಜಿ ನಮೂನೆಯ ಪ್ರಿಂಟ್ ಅಥವಾ ಸ್ಕ್ರೀನ್ಶಾಟ್ ತೆಗೆದು ಸುರಕ್ಷಿತವಾಗಿಟ್ಟುಕೊಳ್ಳಿ.
ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 23-07-2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24-08-2026
🔗 ಪ್ರಮುಖ ಲಿಂಕ್ ಗಳು
ಆಯ್ಕೆ ಪ್ರಕ್ರಿಯೆ ಮತ್ತು ಜವಾಬ್ದಾರಿಗಳು:
ಶಿವಮೊಗ್ಗ ಜಿಲ್ಲಾ ನ್ಯಾಯಾಲಯದ ನೇಮಕಾತಿಯಲ್ಲಿ ಅರ್ಹ ಅಭ್ಯರ್ಥಿಗಳನ್ನು ಎಸ್.ಎಸ್.ಎಲ್.ಸಿ (SSLC) ಅಂಕಗಳು ಹಾಗೂ ಸಂದರ್ಶನದ (Interview) ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳು ಶಿವಮೊಗ್ಗ ಜಿಲ್ಲೆಯ ವಿವಿಧ ಕೋರ್ಟ್ಗಳಲ್ಲಿ ಕಚೇರಿ ಕೆಲಸಗಳು, ಫೈಲ್ಗಳ ನಿರ್ವಹಣೆ ಮತ್ತು ನ್ಯಾಯಾಲಯದ ನೋಟೀಸ್ಗಳನ್ನು ತಲುಪಿಸುವ ಜವಾಬ್ದಾರಿಯನ್ನು ನಿರ್ವಹಿಸಬೇಕಾಗುತ್ತದೆ. ಆಸಕ್ತ ಕನ್ನಡಿಗರು ಕೊನೆಯ ದಿನಾಂಕದವರೆಗೆ ಕಾಯದೆ ತಕ್ಷಣವೇ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ.


ಇದನ್ನು ಓದಿ
ಕರ್ನಾಟಕ ವಸತಿ ಶಾಲೆಗಳಲ್ಲಿ ಭಾರಿ ಶಿಕ್ಷಕರ ನೇಮಕಾತಿ: ವಿವಿಧ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ!

